Breaking News

ಎತ್ತಿನಹೊಳೆ ಯೋಜನೆ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ..

ಬೆಂಗಳೂರು: ನೇತ್ರಾವತಿ ನದಿ ತಿರುವು ಯೋಜನೆಯಾಗಿರುವ ‘ಎತ್ತಿನಹೊಳೆ ಯೋಜನೆ’ ದೊಡ್ಡಬಳ್ಳಾಪುರ ಸೇರಿದಂತೆ ಈ ಭಾಗದ ಬಯಲುಸೀಮೆಗೆ ನೀರು ಒದಗಿಸುವ ಮಹತ್ವದ ಯೋಜನೆ ಇದಾಗಿದ್ದು, ಕೆಲವು ವರ್ಷಗಳಿಂದ ಸ್ಥಗಿಗೊಂಡಿತ್ತು. ಇದೀಗ ಮರುಚಾಲನೆ ಜೊತೆಗೆ ಪೂರ್ಣಗೊಳ್ಳುವ ಗಡುವು ಕುರಿತು ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ.

ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಅವರು ಸೋಮವಾರ ತಿಳಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಬೆಳಗ್ಗೆ ಎತ್ತಿನ ಹೊಳೆ ಯೋಜನೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುಧಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು.

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *