Breaking News

ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದೆ…..

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ನಟಿ ಹೇಮಾ ಚೌಧರಿ ಅವರು ಬ್ರೈನ್ ಹ್ಯಾಮರೇಜ್​ನಿಂದ ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್​ ಇರುವುದು ತಿಳಿದು ಬಂದಿದ್ದು, ಸದ್ಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಇನ್ನು ನಟಿ ಹೇಮಾ ಚೌಧರಿ ಅವರ ಕುಟುಂಬಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಅವರ ಮಗ ಐರ್ಲ್ಯಾಂಡ್‌ನಲ್ಲಿದ್ದು , ಕುಟುಂಬಸ್ಥರು ಮಗನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇನ್ನು ಹಿರಿಯ ನಟಿಯ ಆರೋಗ್ಯದ ಬಗ್ಗೆ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆ ವೈದ್ಯರು ಅಧೀಕೃತವಾಗಿ ಮಾಹಿತಿ ನೀಡಬೇಕಾಗಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *