Breaking News

ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿ…..

ಬೆಂಗಳೂರು ಮಹಾನಗರದ ಟ್ರಾಫಿಕ್ ಸಮಸ್ಯೆಗೆ ಪರಿಹಾರವಾಗಿರುವ ನಮ್ಮ ಮೆಟ್ರೋದ ಹಲವು ಮಾರ್ಗಗಳ ಕಾಮಗಾರಿ ವೇಗ ಪಡೆದುಕೊಂಡಿದೆ. ಟ್ರಾಫಿಕ್ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿರುವ ಮೆಟ್ರೋದ ನೀಲಿ, ಹಳದಿ, ಪಿಂಕ್ ಮಾರ್ಗದ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಹತ್ವಾಕಾಂಕ್ಷೆಯ ಬೆಂಗಳೂರು ನಮ್ಮ ಮೆಟ್ರೋದ ಬ್ಲೂ ಲೈನ್ ಹಂತ 2A, ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ ಆರ್ ಪುರ (ಹೊರ ವರ್ತುಲ ರಸ್ತೆ ಮಾರ್ಗ) ವರೆಗೆ ವ್ಯಾಪಿಸಿದ್ದು, ಯೋಜನೆಯ ಶೇ. 39% ಗರ್ಡರ್ ಲಾಂಚ್‌ಗಳನ್ನು ಪೂರ್ಣಗೊಳಿಸುವುದರೊಂದಿಗೆ ಗಮನಾರ್ಹ ಮೈಲಿಗಲ್ಲನ್ನು ಸಾಧಿಸುತ್ತಿದೆ. ನಗರದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಮೆಟ್ರೋ ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ವೇಗ ಸಿಕ್ಕಿದೆ. ಭಾರತದ ಪ್ರಮುಖ ನಿರ್ಮಾಣ ಕಂಪನಿಯಾದ ಆಫ್ಕಾನ್ಸ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಈ ಪ್ರಗತಿಯಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸಿದೆ.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *