Breaking News

ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ: ಎಚ್‌ ವಿಶ್ವನಾಥ್‌.

ಮೈಸೂರು: ಸಂಸತ್‌ ನಲ್ಲಿ ಭದ್ರತಾ ಲೋಪಕ್ಕೆ ಭದ್ರತಾ ಸಿಬ್ಬಂದಿ ಕೊರತೆ ಕಾರಣ ಇದೆ. ಶೇ.40ರಷ್ಟು ಅಧಿಕಾರಿಗಳೇ ಇಲ್ಲ, ಇದೆಲ್ಲ ಹೊರಗೆ ಬರುತ್ತೆ ಅನ್ನುವ ಕಾರಣಕ್ಕೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ. ಪ್ರಧಾನ ಮಂತ್ರಿಗೆ ಮಾಧ್ಯಮಗಳ ಮುಂದೆ ಬರುವ ತಾಕತ್ತು ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಸಂಸತ್ ಅಧಿವೇಶನದಿಂದ ಸಂಸದರ ಅಮಾನತು ವಿಚಾರವಾಗಿ ಮಾತನಾಡಿ, ಲೋಕಸಭೆ, ರಾಜ್ಯಸಭೆಯ ಒಟ್ಟು 142 ಸಂಸದರನ್ನು ಅಮಾನತು ಮಾಡಲಾಗಿದೆ.

ನುಸುಳುಕೋರರ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಸಂಸತ್ತು ಇರೋದೇ ಚರ್ಚೆ ಮಾಡುವುದಕ್ಕೆ, ಮಾತನಾಡುವುದೇ ಬೇಡ ಎಂದರೆ ಹೇಗೆ ? ವಿರೋಧ ಪಕ್ಷಗಳು ಪ್ರಶ್ನೆ ಮಾಡುತ್ತಾರೆ. ಅದೆಲ್ಲದಕ್ಕೂ ಆಡಳಿತ ಪಕ್ಷ ಉತ್ತರ ಕೊಡಬೇಕು. ಪ್ರಪಂಚದ ಮುಂದೆ ಭಾರತ ಬೆತ್ತಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಿವೆ. ಇದನ್ನು ನಾನು ಸ್ವಾಗತ ಮಾಡುತ್ತೇನೆ. ರಾಜ್ಯದ ದೇವೇಗೌಡರು ಪ್ರಧಾನಿ ಆಗಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರ ಮೂಲಕ ಇನ್ನೊಂದು ಅವಕಾಶ ಸಿಕ್ಕಿದೆ, ಮಲ್ಲಿಕಾರ್ಜುನ ಖರ್ಗೆ ಸಾಮಾನ್ಯರಲ್ಲ. ಕಾರ್ಮಿಕನ ಮಗನಾಗಿ ಹುಟ್ಟಿ ಕೇಂದ್ರದಲ್ಲಿ ಕಾರ್ಮಿಕ ಸಚಿವರಾಗಿ ಬೆಳೆದವರು. ಶೋಷಿತ ಸಮುದಾಯಗಳಿಂದ ಬಂದವರು. ಶಾಸಕರು, ಸಚಿವರು, ಕೇಂದ್ರ ಸಚಿವರಾಗಿ ಕೆಲಸ ಮಾಡಿದ್ದಾರೆ. ಮಲ್ಲಿಕಾರ್ಜುನ್‌ ಖರ್ಗೆ ಪ್ರಧಾನಿಯಾದರೆ ದೇಶ ಸಂತೋಷ ಪಡುತ್ತದೆ. ಪ್ರಧಾನಿಯಾಗಲಿ ಎಂದು ಬಯಸುವ ಪ್ರಜಾತಂತ್ರ ಪರವಾದ ಜನರಲ್ಲಿ ನಾನೂ ಒಬ್ಬ ಎಂದು ಹೇಳಿದರು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *