ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಟಿಆರ್ ಬಾಲು ಇಂಡಿಯಾ ಬ್ಲಾಕ್ ನಾಯಕರ ಸಭೆಯಲ್ಲಿ ಹಿಂದಿಯಲ್ಲಿ ಮಾಡಿದ ಭಾಷಣ ಅನುವಾದ ಮಾಡುವಂತೆ ಕೇಳಿದಾಗ ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ನಾಯಕ ನಿತೀಶ್ ಕುಮಾರ್ ಕಿಡಿ ಕಾರಿದ್ದಾರೆ. ನಿತೀಶ್ ಕುಮಾರ್ ಅವರು ಇಂಡಿಯಾ ಬ್ಲಾಕ್ ನಾಯಕರನ್ನು ಉದ್ದೇಶಿಸಿ ಮಾತನಾಡುವಾಗ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ಮತ್ತು ಟಿಆರ್ ಬಾಲು ಸಹ ಉಪಸ್ಥಿತರಿದ್ದರು. ನಿತೀಶ್ ಏನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಳ್ಳಲು ಸಾಧ್ಯವಾಗದೆ, ಟಿಆರ್ ಬಾಲು ಅವರು ಭಾಷಣವನ್ನು ಭಾಷಾಂತರಿಸುವಂತೆ ಇನ್ನೊಂದು ಬದಿಯಲ್ಲಿ ಕುಳಿತಿದ್ದ ರಾಷ್ಟ್ರೀಯ ಜನತಾ ದಳದ ರಾಜ್ಯಸಭಾ ಸಂಸದ ಮನೋಜ್ ಕೆ. ಝಾ ಅವರಿಗೆ ಸೂಚಿಸಿದರು.
ಮನೋಜ್ ಝಾ ನಿತೀಶ್ ಕುಮಾರ್ ಅವರ ಅನುಮತಿ ಕೇಳುತ್ತಿದ್ದಂತೆ, “ನಾವು ನಮ್ಮ ದೇಶವನ್ನು ಹಿಂದೂಸ್ತಾನ್ ಎಂದು ಕರೆಯುತ್ತೇವೆ ಮತ್ತು ಹಿಂದಿ ನಮ್ಮ ರಾಷ್ಟ್ರೀಯ ಭಾಷೆ, ನಮಗೆ ಭಾಷೆ ತಿಳಿದಿರಬೇಕು” ಎಂದು ಉದ್ದಟತನದಿಂದ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





