Breaking News

ಹೊಸ ವರ್ಷಾಚರಣೆಗೆ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ…

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಹೊಸ ವರ್ಷ ಎದುರು ನೋಡುತ್ತಿದ್ದಾರೆ. ಇದರಲ್ಲಿ ಬಹುತೇಕರು ಹೊಸ ವರ್ಷಾಚರಣೆಗೆ ಸಿದ್ಧವಾಗಿದೆ ಈ ಸಂದರ್ಭದಲ್ಲಿ ನಾಡಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ‌ ನಡೆಯದಂತೆ ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ನಿರ್ದೇಶನ ನೀಡಿದರು.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ, ಅಬಕಾರಿ ಇಲಾಖೆ, ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಎಂಟಿಸಿಯ ಹಿರಿಯ ಅಧಿಕಾರಿಗಳ ಜೊತೆ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ಎಂಜಿ.ರೋಡ್, ಬ್ರಿಗೇಡ್ ರೋಡ್, ಎಲೆಕ್ಟ್ರಾನಿಕ್ ಸಿಟಿ, ಇಂದಿರಾನಗರ ಹಾಗೂ ಶಾಪಿಂಗ್ ಮಾಲ್, ಸ್ಟಾರ್ ಹೋಟೆಲ್‌ಗಳಲ್ಲಿ ಹೊಸ ವರ್ಷ ಆಚರಿಸಲು ಹೆಚ್ಚಿನ ಜನಸಂಖ್ಯೆ ಸೇರುವ ಸಾಧ್ಯತೆ ಇದೆ. ಎಲ್ಲ ರೀತಿಯ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ನಗರಗಳಲ್ಲಿಯೂ ಸಹ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

Share News

About BigTv News

Check Also

ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!

ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 …

Leave a Reply

Your email address will not be published. Required fields are marked *