Breaking News

ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ: ಸಿದ್ದರಾಮಯ್ಯ.

ಮೈಸೂರು: ಸಂಸತ್ತಿನಲ್ಲಿ 146 ಸಂಸದರು ಅಮಾನತುಗೊಂಡಿದ್ದಾರೆ. ಸದನದಲ್ಲಿ ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತ್ತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಪ್ರಜಾಪ್ರಭುತ್ವದಲ್ಲಿ ವಿರೋಧಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದರು.

ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *