Breaking News

ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ……

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನೆಗೆ ಭೇಟಿ ಕೊಟ್ಟು ಬಂದ ಬಳಿಕ ಧಾರವಾಡ ಲೋಕಸಭಾ ಟಿಕೆಟ್ ಕುರಿತು ಸಾಕಷ್ಟು ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿವೆ. ಈ ಮಧ್ಯೆ ಜಗದೀಶ್ ಶೆಟ್ಟರ್ ಅವರು ದೆಹಲಿಗೆ ಹೋಗಿ ಬಂದಿರುವುದು ಭಾರೀ ಕುತೂಹಲ ಕೆರಳಿಸಿದೆ. ಈ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್ ಅವರು, ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಾಜ್ಯ ಕಾಂಗ್ರೆಸ್ ಜಗದೀಶ್ ಶೆಟ್ಟರ್ ಅವರಿಗೆ ಧಾರವಾಡ ಟಿಕೆಟ್ ನೀಡುವಂತೆ ದೆಹಲಿ ಹೈಕಮಾಂಡ್‌ಗೆ ತಿಳಿಸಿದೆ ಎಂಬ ವಿಷಯ ಹರಿದಾಡಿದ ಬೆನ್ನಲ್ಲೆ ಹೀಗೆ ರಾಜ್ಯ ನಾಯಕರು ದೆಹಲಿ ಭೇಟಿ ನೀಡುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *