Breaking News

ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ: ಸಿದ್ದರಾಮಯ್ಯ.

ಮೈಸೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್‌ 23 ರಂದು ಅಮಿತ್‌ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಶುಕ್ರವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ ಸರ್ಕಾರ ಈಡೇರಿಸುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದರು.

ನವದೆಹಲಿಯಲ್ಲಿ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರಾಗಿದ್ದು, ಅವರು ಬರಪರಿಸ್ಥಿತಿಯ ಬಗ್ಗೆ ನಾಳೆ 23 ರಂದು ಸಭೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

Share News

About BigTv News

Check Also

ಸಚಿವ ಸಂತೋಷ್ ಲಾಡ್ ಅವರಿಗೆ ಅದ್ದೂರಿ ಗೌರವ ಸನ್ಮಾನ; ಆತ್ಮೀಯ ಭೇಟಿಯಲ್ಲಿ…

ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …

Leave a Reply

Your email address will not be published. Required fields are marked *