ದೆಹಲಿ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಮುಖ್ಯಮಂತ್ರಿಗಳೇ ಕೈಹಾಕಿರುವುದು ಈ ನಾಡಿನ ಒಂದು ದುರದೃಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
ಈ ಕುರಿತು ದೆಹಲಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಅವರಿಂದ ಇಂಥ ಹೇಳಿಕೆಯನ್ನು ಯಾರೂ ನಿರೀಕ್ಷೆ ಮಾಡಿರಲಿಲ್ಲ. ಕನಿಷ್ಠ ಪಕ್ಷ ಶಾಲಾ, ಕಾಲೇಜುಗಳಿಗೆ ಹೋಗುವ ಮಕ್ಕಳನ್ನಾದರೂ ರಾಜಕೀಯದಿಂದ ದೂರ ಇಡುವ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕಿತ್ತು ಎಂದು ಆಕ್ಷೇಪಿಸಿದರು.
ಒಂದೆಡೆ ಹಿಜಾಬ್‍ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮುಖ್ಯಮಂತ್ರಿಗಳು, ಮತ್ತೊಂದು ಕಡೆ ಇದೇ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗ ಪರೀಕ್ಷೆಗೆ ಹೋಗುವ ವಿದ್ಯಾರ್ಥಿ, ವಿದ್ಯಾರ್ಥಿನಿಯರ, ತಾಯಂದಿರ ತಾಳಿ, ಕಾಲುಂಗುರ ತೆಗೆದಿಟ್ಟು ಹೋಗಲು ತಿಳಿಸುತ್ತದೆ. ರಾಜ್ಯ ಸರಕಾರದ ಈ ನಡವಳಿಕೆ ನಿಜವಾಗಿಯೂ ತಲೆತಗ್ಗಿಸುವಂಥದ್ದು. ಬಿಜೆಪಿ, ಇದನ್ನು ಬಲವಾಗಿ ಖಂಡಿಸುತ್ತದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





