Breaking News

ಎಲ್ಲಾ ಸಮಸ್ಯೆ ಮರೆತು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ……

ಬೆಂಗಳೂರು: ರಾಜ್ಯದಲ್ಲಿ ಎಲ್ಲೆಡೆ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧ ಇದೆ. ಮಹಿಳೆಯರು ಬೇರೆಡೆ ಎಲ್ಲಿ ಬೇಕು ಅಲ್ಲಿ ಹಾಕಿಕೊಳ್ಳಲು ಅವಕಾಶ ಇದೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ. ಅದನ್ನು ವಾಪಸ್ ಪಡೆಯುವ ಪ್ರಶ್ನೆ ಎಲ್ಲಿ ಬಂತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಮರೆಮಾಚಿ ಜನರ ದಾರಿ ತಪ್ಪಿಸಲು, ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಹಿಜಾಬ್ ವಿಷಯ ಪ್ರಸ್ತಾಪ ಮಾಡಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

1984 ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅನ್ವಯ ಶಾಲಾ ಸಮವಸ್ತ್ರ ಜಾರಿಗೆ ತರಲಾಗಿತ್ತು, ಅದನ್ನು ನಮ್ಮ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಮುಖ್ಯಮಂತ್ರಿಗಳು ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಹಿಜಾಬ್ ಪ್ರಕರಣ ಈಗಾಗಲೇ ಕೊರ್ಟ್ ನಲ್ಲಿ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿಗಳು ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು. ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ.‌ ಪತ್ರ ಕೂಡ ಬರೆದಿದ್ದಾರೆ.

ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಈ ಸರ್ಕಾರ ದಿವಾಳಿಯಾಗಿದೆ. . ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ರೂ ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *