Breaking News

ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸಿದ್ದರಾಮಯ್ಯಗೆ ಸವಾಲು…

ಸಿಎಂ ಸಿದ್ದರಾಮಯ್ಯಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ, ಬಿಜೆಪಿ ಮುಖಂಡ ಅನಂತ ಕುಮಾರ್ ಹೆಗಡೆ ಸವಾಲು ಹಾಕಿದ್ದಾರೆ. ಹಲವು ತಿಂಗಳಿನಿಂದ ಕಣ್ಮರೆಯಾಗಿದ್ದ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಧ್ಯವಾದರೆ ಭಾರತವನ್ನು ‘ಹಿಂದೂ ರಾಷ್ಟ್ರ’ ಆಗದಂತೆ ತಡೆಯಲಿ ಎಂದು ಸವಾಲು ಹಾಕಿದ್ದು, ಹಿಜಾಬ್ ವಿಚಾರದ ಬಗ್ಗೆ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹೆಗ್ಡೆ, ಈ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಸಿದ್ದರಾಮಯ್ಯನವರ ಸರ್ಕಾರ ಮೊಹಮ್ಮದ್ ಬಿನ್ ತುಘಲಕ್ ಸರ್ಕಾರ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *