Breaking News

ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ: ಆರ್‌.ಅಶೋಕ.

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಯೋಜನೆಗಳಿಗೆ ಪೂರಕವಾಗಿ ನಿಲುತ್ತಿತ್ತಿಲ್ಲ. ಯಾವ ಯೋಜನೆಗಳಿಗೂ ಅಡಿಗಲ್ಲು ಹಾಕದೇ, ನಾಡಿನ ಜನರ ಮೇಲೆ ಕಲ್ಲು ಹಾಕಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಹಿಂದೂ-ಮುಸ್ಲಿಮರ ನಡುವೆ ಬೆಂಕಿ ಹಚ್ಚುತ್ತಿದ್ದಾರೆ. ಇನ್ನೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಹತಾಶರಾಗಿ ಹೀಗೆ ಮಾತನಾಡುತ್ತಿದ್ದಾರೆ ಎಂದು ಬ್ರಿಟೀಷರ ಬೂಟು ನೆಕ್ಕುವವರು ಹೇಳಿಕೆಗೆ ವಿಪಕ್ಷ ನಾಯಕ ಆರ್‌.ಅಶೋಕ ತಿರುಗೇಟು ಕೊಟ್ಟರು.

ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ 7 ಕೋಟಿ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕಿದ್ದು, ಈವರೆಗೆ ಅಭಿವೃದ್ಧಿ ಕಾಮಗಾರಿಗೆ ಒಂದು ಅಡಿಗಲ್ಲನ್ನೂ ಹಾಕಿಲ್ಲ. ಜನರು ಸರ್ಕಾರದ ಬಗ್ಗೆ ಛೀ ಥೂ ಎಂದು ಮಾತನಾಡುತ್ತಿದ್ದಾರೆ. ಆದರೆ ಸರ್ಕಾರ ಹಿಂದೂ ಮುಸ್ಲಿಮರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ.
ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಹತಾಶರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ ವೀರನಾಗಿದ್ದಾರೆ. ಬರ ಪರಿಹಾರಕ್ಕೆ ಇದೇ ವಾರದಲ್ಲಿ 2 ಸಾವಿರ ರೂ. ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಹೇಳಿದೆ. ಆದರೆ ಈವರೆಗೆ ಹಣ ಸಿಕ್ಕಿಲ್ಲ. ಶಾಲೆಯ ಶೌಚಾಲಯ ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ.

Share News

About BigTv News

Check Also

ರೌಡಿಶೀಟರ್ ಹ್ಯಾರಿಸ್ ಪಠಾಣ್ ಗೂಂಡಾ ಕಾಯ್ದೆ ಅಡಿ ಬಂಧನ…

ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ …

Leave a Reply

Your email address will not be published. Required fields are marked *