ರಾಯಚೂರು: 2023ನೇ ವರ್ಷದ ಕೊನೆಯ ದಿನದಲ್ಲಿದ್ದೇವೆ. 2023ನೇ ವರ್ಷ ರಾಜ್ಯ ರಾಜಕಾರಣದ ದಿಕ್ಕು ಬದಲಿಸಿದರೆ, ಜಿಲ್ಲೆಯ ರಾಜಕಾರಣದಲ್ಲಿ ದೂಳೆಬ್ಬಿಸಿತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೆರೆದ ರಾಜಕಾರಣಿಗಳು ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾದರು. ಪಿಡಿಒಗಳು ಭ್ರಷ್ಟಾಚಾರದ ಸುಳಿಯಲ್ಲಿ ಸಿಲುಕಿದ್ದು ಹಾಗೂ ಅಕ್ರಮ ಮರಳು ದಂದೆ ಜಿಲ್ಲೆಯಲ್ಲಿ ಹೆಚ್ಚು ಸದ್ದು ಮಾಡಿತು.
ಜೂನ್ 28ರಂದು ಸಿಂಧನೂರಲ್ಲಿ ನಗರ ಯೋಜನೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರಣಪ್ಪ ಮಡಿವಾಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 13 ಲಕ್ಷ ನಗದು, ಚಿನ್ನಾಭರಣ ವಶಪಡಿಸಿಕೊಂಡರು. ದೇವದುರ್ಗ ತಾಲ್ಲೂಕು ಭ್ರಷ್ಟಾಚಾರದ ಕಪ್ಪುಚುಕ್ಕೆ ಹಚ್ಚಿಕೊಂಡಿತು. ಜಿಲ್ಲೆಯಲ್ಲಿ ಹಿರಿಯ ಅಧಿಕಾರಿಗಳೇ ಭ್ರಷ್ಟರನ್ನು ರಕ್ಷಿಸಿ ಪರೋಕ್ಷವಾಗಿ ಅವರ ಬೆಂಬಲಕ್ಕೆ ನಿಂತ ವಿಷಯ ಇಸಿಹಾಸ ಪುಟಗಳಲ್ಲಿ ದಾಖಲಾಯಿತು. ನರೇಗಾ ಕಾಮಗಾರಿಯಲ್ಲಿ ಕೋಟ್ಯಂತರ ಲೂಟಿ, ಎಗ್ಗಿಲ್ಲದೇ ನಡೆದ ಅಕ್ರಮ ಮರಳುಗಾರಿಕೆ ಹೆಚ್ಚು ಚರ್ಚೆಗೆ ಬಂದಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





