Breaking News

ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ….

ದೆಹಲಿ: ದೇಶದಲ್ಲಿ jn. 1 ಉಪತಳಿ ಆತಂಕದ ನಡುವೆ ಕರೋನಾ ಸೊಂಕೀತರ ಸಂಖ್ಯೆ ಗಣನೀಯವಾಗಿ ಏರಿಕೆ ಯಾಗಿದ್ದು, ಒಂದೇ ದಿನದಲ್ಲಿ 600ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಯಲ್ಲಿ 656 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. ಈ ಮೂಲದ ಸೊಂಕೀತರ ಸಂಖ್ಯೆ 3,742ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣ 4054 ಕ್ಕೆ ಏರಿಕೆಯಾಗಿದೆ. ಈವರೆಗೆ 44471860 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 220,67,79,081 ಜನರಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ.

ನೆರೆಯ ಕೇರಳದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿರುವುದರಿಂದ ರಾಜ್ಯ ಸರ್ಕಾರವು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಜ್ಯದ ಗಡಿ ಜಿಲ್ಲೆಗಳ ಅರೋಗ್ಯಧಿಕಾರಿಗಳಿಗೆ ಸರ್ಕಾರ ಈಗಾಗಲೇ ಎಚ್ಚರಿಕೆ ನಿಡಿದೆ. ಆದರೂ ಈ ಹಂತದಲ್ಲಿ ಯಾವುದೇ ಪ್ರಯಾಣ ನಿರ್ಬಂಧಗಳನ್ನು ವಿಧಿಸಲಾಗಿಲ್ಲ. ಸರ್ಕಾರವು ಹೊಸ ಕ್ಯಾಬಿನೆಟ್ ಉಪಸಮಿತಿಯನ್ನು ರಚಿಸಿತು. ಇದು ಅಸ್ತಿತ್ವದಲ್ಲಿರುವ ತಾನಂತ್ರಿಕಾ ಸಲಹಾ ಸಮಿತಿ ಯೊಂದಿಗೆ ಕೆಲಸ ಮಾಡಲಿದೆ ಎಂದು ವಾರದಿಯಾಗಿದೆ.

ಸಚಿವರನ್ನೊಳಗೊಂಡ ಸಮಿತಿ ಕೋವಿಡ್ -19ಅನ್ನು ನಿಭಾಯಿಸಲು ಹೊಸ ಉಪಾಸಮಿತಿಯಲ್ಲಿ ರಾಜ್ಯ ಅರೋಗ್ಯ ಸಚಿವ ದಿನೇಶ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣುಪ್ರಕಾಶ ರುದ್ರಪ್ಪ ಪಾಟೀಲ್, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಮತ್ತು ಉನ್ನತ ಶಿಕ್ಷಣ ಸಚಿವ ಎಮ್ ಸಿ ಸುಧಾಕರ್ ಇದ್ದಾರೆ. ಜನರು ಭಯ ಭೀತರಾಗುವ ಅಗತ್ಯವಿಲ್ಲ ಮತ್ತು ಸೊಂಕಿನ ಅಪಾಯವನ್ನು ತಪ್ಪಿಸಲು ಮೊನ್ನೆಚ್ಚರಿಕೆಯಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರಿಗೆ ಕೇಳಿದ್ದಾರೆ. ಕರ್ನಾಟಕ ಸರ್ಕಾರವು 60 ವರ್ಷ ಮತ್ತು ಅದ್ಕಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳು ಕೊಮೋಬ್ರಿಡಿಟಿ ಹೊಂದಿರುವವರು ಮೂತ್ರಪಿಂಡ, ಹೃದಯ ಮತ್ತು ಯಕ್ರತ್ತಿನ ಕಾಯಿಲೆಗಳು. ಗರ್ಭಿಣಿಯರು ಮತ್ತು ಹಾಲುನಿಸುವ ತಾಯಂದಿರು ಸಾರ್ವಜನಿಕ ಸ್ಥಳಗಲ್ಲಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಿದೆ. ಹೆಚ್ಚುವಾರಿಯಾಗಿ, ಮೆಚ್ಚಿದ ಕಳಪೆ ಗಾಳಿ ಇರುವ ಸ್ಥಳಗಳು ಮತ್ತು ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡುವುದನ್ನು ತಡೆಯಲು ಅವರಿಗೆ ಬಲವಾಗಿ ಸಲಹೆ ನೀಡಲಾಗುತ್ತದೆ. ಕರ್ನಾಟಕ ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದರು.

Share News

About BigTv News

Check Also

Featured Video Play Icon

ಹುಬ್ಬಳ್ಳಿ : ಹಿಂದೂ ವಿಧಿವಿಧಾನಗಳ ಪ್ರಕಾರ ಅಂತ್ಯಕ್ರಿಯೆ: ತಹಶೀಲ್ದಾರ ಕಲಗೌಡ ಪಾಟೀಲ..!

ಹುಬ್ಬಳ್ಳಿ: ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿದ ಹಂತಕ ರಿತೇಶಕುಮಾರ್ ಮೃತ ದೇಹವನ್ನು ಹಿಂದೂ ವಿಧಿವಿಧಾನಗಳ …

Leave a Reply

Your email address will not be published. Required fields are marked *