ಮೈಸೂರು: ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಆರೋಪಿಗಳು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದಿದ್ದರು ಎಂಬ ವಿಚಾರದೊಂದಿಗೆ ಅವರ ಹೆಸರು ದೇಶದಾದ್ಯಂತ ಮುನ್ನಲೆಗೆ ಬಂದಿದ್ದು, ಎದುರಾಳಿ ಕಾಂಗ್ರೆಸ್ ನಾಯಕರು ಇದನ್ನು ಹೇಗೆ ಬೇಕೋ ಹಾಗೆ ಬಳಸಿಕೊಳ್ಳುವಲ್ಲಿಯೂ ಯಶಸ್ವಿಯಾಗಿರುವುದರಿಂದ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಲಾಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ.
ಕ್ಷೇತ್ರದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿದ್ದು, ಕೆಲವರು ಈ ಬಾರಿ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲ್ಲ ಎಂಬಂತಹ ಸುದ್ದಿಗಳಿಗೆ ರೆಕ್ಕೆಪುಕ್ಕಗಳು ಹುಟ್ಟಿಕೊಳ್ಳುತ್ತಿದ್ದು, ಇದು ಎದುರಾಳಿ ಪಕ್ಷದ ನಾಯಕರಲ್ಲಿ ಮಾತ್ರವಲ್ಲದೆ, ಸ್ವಪಕ್ಷದ ಕೆಲವು ನಾಯಕರಲ್ಲಿಯೂ ಬಯಕೆಯನ್ನು ಹುಟ್ಟು ಹಾಕಿದೆ ಎಂದರೂ ತಪ್ಪಾಗಲಾರದು. ಆದರೆ ರಾಜಕೀಯ ಮೂಲಗಳ ಪ್ರಕಾರ ಈ ಬಾರಿಯೂ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.
ಎರಡು ಬಾರಿಯೂ ಗೆಲುವಿನ ಪತಾಕೆ ಹಾರಿಸಿರುವ ಸಂಸದ ಪ್ರತಾಪ್ ಸಿಂಹ ಅವರು ಈ ಬಾರಿಯ ಚುನಾವಣೆಯಲ್ಲಿ ಸುಲಭವಾಗಿಯೇ ಗೆಲ್ಲುತ್ತಾರೆ. ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯನ್ನು ಮತದಾರರು ನೋಡುವ ರೀತಿಯೇ ವಿಭಿನ್ನವಾಗಿದೆ. ಹೀಗಾಗಿ ಕೇಂದ್ರದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿಯೇ ಉಳಿಯಬೇಕೆಂದು ಬಯಸುವ ಮತದಾರರು ಬಿಜೆಪಿಗೆ ಮತ ನೀಡುತ್ತಾರೆ ಎಂಬುದು ಬಿಜೆಪಿಯನ್ನು ಬೆಂಬಲಿಸುವ ಮತದಾರರ ಅಭಿಪ್ರಾಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





