Breaking News

ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ: ಸಿದ್ದರಾಮಯ್ಯ.

ಬೆಂಗಳೂರು: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಉಚಿತ ಬಸ್ ಪ್ರಯಾಣವನ್ನು ಬಿಜೆಪಿ ಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

Share News

About BigTv News

Check Also

ಸಿವಿಲ್ ವ್ಯಾಜ್ಯದಲ್ಲಿ ಖಾಕಿ ದರ್ಬಾರ್‌ಗೆ ಹೈಕೋರ್ಟ್ ಬ್ರೇಕ್..! ಅಧಿಕಾರ ಮೀರಿದರೆ ಪೊಲೀಸರಿಗೇ ಶಿಸ್ತು ಕ್ರಮದ ಬಿಸಿ..!!

ಆಸ್ತಿ ವ್ಯಾಜ್ಯದಲ್ಲಿ ಪೊಲೀಸರ ಆಟಕ್ಕೆ ಕಡಿವಾಣ..! ಸುತ್ತೋಲೆ ಉಲ್ಲಂಘಿಸಿದರೆ ಅಧಿಕಾರಿಗಳೇ ನೇರ ಹೊಣೆ — ಇಲಾಖೆಯ ಖಡಕ್ ವಾರ್ನಿಂಗ್..! ಸಿವಿಲ್ …

Leave a Reply

Your email address will not be published. Required fields are marked *