ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣ ಪ್ರತಿಷ್ಠೆ ಮುಂದಿನ ಜನವರಿ 22ರಂದು ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ. ಮಂಗಳವಾರ ಬೆಳಗ್ಗೆ ಬೆಂಗಳೂರಿನ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಜೆ ಪಿ ನಗರ ನಿವಾಸಕ್ಕೆ ಭೇಟಿ ನೀಡಿದ್ದ ಟ್ರಸ್ಟ್ ನ ಪ್ರಮುಖರು, ಆಹ್ವಾನ ಪತ್ರಿಕೆ ನೀಡಿ ಕುಟುಂಬ ಸಮೇತವಾಗಿ ತಾವು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಕೋರಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ದ ಅಖಿಲ ಭಾರತೀಯ ಸಂಪರ್ಕ್ ಪ್ರಮುಖ್ ಆಗಿರುವ ರಾಮ ಲಾಲ್ ಮತ್ತಿತರರು ಟ್ರಸ್ಟ್ ಪರವಾಗಿ ಕುಮಾರಸ್ವಾಮಿ ಹಾಗೂ ಅವರ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಅವರ ಪುತ್ರ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





