ಬೆಂಗಳೂರು: ಸಾಲ ಮನ್ನಾ ಆಸೆಗಾಗಿ ಬರಗಾಲ ಬರಲಿ ಎಂದು ರೈತರು ಆಸೆ ಪಡುತ್ತಾರೆ ಎಂದು ಉಡಾಫೆ ಮಾತಾಡುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ರೈತರಿಗೆ ಬರ ಪರಿಹಾರದ ವಿಷಯದ ಬಗ್ಗೆ ಮಾತನಾಡುವ ನೈತಿಕತೆಯೇ ಉಳಿದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಜರಿದಿದ್ದಾರೆ. ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಯಾವ ಯಾವ ಅವಧಿಯಲ್ಲಿ ಎಷ್ಟು ಪಟ್ಟು ಅನುದಾನ ಬಂದಿದೆ, ಶಿಫಾರಸು, ವಿಶೇಷ ಅನುದಾನ ಕುರಿತು ಅಂಕಿ ಅಂಶಗಳನ್ನು ಅವರು ಬಿಚ್ಚಿಟ್ಟಿದ್ದಾರೆ.
15ನೇ ಹಣಕಾಸು ಆಯೋಗ ತನ್ನ 2020-21ರ ಮಧ್ಯಂತರ ವರದಿಯಲ್ಲಿ ಕರ್ನಾಟಕಕ್ಕೆ 5495 ಕೋಟಿ ರೂ. ಶಿಫಾರಸು ಮಾಡಿದ್ದುದು ನಿಜ. ಆದರೆ 2021-22 ರಿಂದ 2025-26ರವರೆಗಿನ ತನ್ನ ಅಂತಿಮ ವರದಿಯಲ್ಲಿ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯಕ್ಕೆ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಇದು ಸತ್ಯಾಂಶ. ತಾವು ಹೇಳಿರುವುದು ಅರ್ಧ ಸತ್ಯವೆಂದು ತಮಗೂ ಗೊತ್ತು. ಅಲ್ಲವೇ?
bigtvnews | Hubli Dharwad News | Kannada News | Karnataka News Hubli News | News In Hubli | Local news





