Breaking News

ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ನೀಡಿರುವ ಹೇಳಿಕೆಗೆ ಹೆಚ್‌ ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ…..

ಬೆಂಗಳೂರು: ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ನೀಡಿರುವ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಸಚಿವ ಶ್ರೀ ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದು ಹೇಳಿದ್ದಾರೆ.

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

Share News

About BigTv News

Check Also

ಸಂಚಾರ ನಿಯಮ ಉಲ್ಲಂಘಿಸಿದ್ರೆ ಕೇಸ್ ಫಿಕ್ಸ್! 100% ಪ್ರಕರಣ ದಾಖಲಿಸಲು ಪೊಲೀಸರಿಗೆ ಖಡಕ್ ಸೂಚನೆ..

ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ …

Leave a Reply

Your email address will not be published. Required fields are marked *