ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇಂದು ಚಾಲನೆ ನೀಡಲಾಗ್ತಿದೆ. ಯುವಜನರನ್ನೇ ಗುರುಯಾಗಿರಿಸಿಕೊಂಡಿರುವ ಈ ಯೋಜನೆಯು ನಿರುದ್ಯೋಗಿ ಯುವಕರಿಗೆ ಆರ್ಥಿಕ ಸಹಾಯ ನೀಡಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಆನ್‌ಲೈನ್‌ನಲ್ಲಿ ಮಾತ್ರ ಅವಕಾಶ ನೀಡಲಾಗಿದೆ.
ಇಂದು (ಡಿ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2024ರ ಜನವರಿ 12ರಂದು ಹಣ ಜಮಾವಣೆ ಆಗಲಿದೆ. ಹಾಗಾದ್ರೆ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಮುಂದೆ ಓದಿರಿ.
ಯುವನಿಧಿ ಯೋಜನೆಯನ್ನು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಚಾಲನೆ ನೀಡಲಾಗುತ್ತಿದೆ. ಯುವನಿಧಿ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇನ್ನು ಯುವನಿಧಿ ಯೋಜನೆಯು 2022-23ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ತೇರ್ಗಡೆ ಆಗಿ 6 ತಿಂಗಳಿಂದ ಉದ್ಯೋಗ ಸಿಗದೇ ಇರುವವರಿಗೆ ಮಾತ್ರ ಅನ್ವಯವಾಗಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





