ಬೆಂಗಳೂರು: ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಅವರು, ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ ? ಎಂದು ಪ್ರಶ್ನಿಸಿದರು. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ ? ನೀವು ಮಾತಿಗೆ ತಪ್ಪಿದ ಮೋದಿ ಎಂದು ಸಿಎಂ ವ್ಯಾಪಕ ಟೀಕಿಸಿದರು. ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





