Breaking News

ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್​ ಶೋಭಾಯಾತ್ರೆ….

ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್​ ಶೋಭಾಯಾತ್ರೆ ನಡೆಯಲಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭದ್ರತೆಗಾಗಿ 4,000 ಪೊಲೀಸರನ್ನು ನಿಯೋಜಿಸಲಾಗಿದೆ.ಶ್ರೀರಾಮಸೇನೆ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ದತ್ತ ಜಯಂತಿ ಆಚರಣೆ ನಡೆಯಲಿದೆ.

ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ದತ್ತಪೀಠದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇನ್ನು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಅವರಿ​ಗೆ ಚಿಕ್ಕಮಗಳೂರು ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ‌ ಬಂದೋಬಸ್ತ್ ಮಾಡಲಾಗಿದೆ. ದತ್ತಪೀಠ ಸೇರಿದಂತೆ ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಗಡಿಭಾಗ ಸೇರಿ 26 ಚೆಕ್‌ಪೋಸ್ಟ್, 49 ಸೆಕ್ಟರ್ ಆಫೀಸರ್​​ಗಳನ್ನು ನೇಮಕ ಮಾಡಲಾಗಿದೆ.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *