Breaking News

ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶ….

ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯ ಹಗರಣವನ್ನು ರಾಜ್ಯ ಸರ್ಕಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ ತನಿಖಾ ಆಯೋಗವು ಈ ಪ್ರಕರಣದಲ್ಲಿ ದೂರುದಾರರ ಮನವಿಯ ಹಿನ್ನಲೆಯಲ್ಲಿ ರಾಜಕೀಯ ನಾಯಕರಾದಂತ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ವಿವಿಧ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ.
ಈ ಪ್ರಕರಣದ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಬಿ.ವೀರಪ್ಪ ಆಯೋಗದ ಮುಂದೆ ದೂರುದಾರರರು ರಾಜಕೀಯ ನಾಯಕರು ತಮ್ಮ ಬಳಿ ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದ ಸಾಕ್ಷ್ಯಾಧಾರಗಳಿವೆ ಅಂತ ಹೇಳಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಸಮನ್ಸ್ ಜಾರಿಗೊಳಿಸಿ, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಸೂಚಿಸೋದಕ್ಕೆ ಕೋರಿದ್ದರು.ದೂರುದಾರರ ಮನವಿಯನ್ನು ಪುರಸ್ಕರಿಸಿದಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ತನಿಖಾ ಆಯೋಗವು ಇದೀಗ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಸವರಾಜ ದಡೇಸೂರು, ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ, ಸತೀಶ್ ಜಾರಕಿಹೊಳಿ ಸೇರಿದಂತೆ ವಿವಿಧ ರಾಜಕೀಯ ನಾಯಕರಿಗೆ ಸಮನ್ಸ್ ಜಾರಿಗೊಳಿಸಿದೆ.

Share News

About BigTv News

Check Also

ಸಂಚಾರ ನಿಯಮ ಉಲ್ಲಂಘಿಸಿದ್ರೆ ಕೇಸ್ ಫಿಕ್ಸ್! 100% ಪ್ರಕರಣ ದಾಖಲಿಸಲು ಪೊಲೀಸರಿಗೆ ಖಡಕ್ ಸೂಚನೆ..

ಆಗಸ್ಟ್‌ನಲ್ಲಿ 100% ಸಾಧನೆ ಇಲ್ಲ! ಸಂಚಾರ ಪೊಲೀಸರಿಗೆ ಮೇಲಧಿಕಾರಿಗಳ ಖಡಕ್ ವಾರ್ನಿಂಗ್.. ನಿಯಮ ಉಲ್ಲಂಘನೆ ಕಂಡ್ರೆ ಕೇಸ್ ದಾಖಲಿಸಿ! ಪೊಲೀಸರಿಗೆ …

Leave a Reply

Your email address will not be published. Required fields are marked *