ಡಿಸೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕನ್ನಡ ಚಲನಚಿತ್ರ ಕಪ್ (ಕೆಸಿಸಿ) ಪಂದ್ಯಾವಳಿಗೆ ತೆರೆ ಬಿದ್ದಿದೆ.ಫೈನಲ್ ಪಂದ್ಯದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕತ್ವದ ಗಂಗಾ ವಾರಿಯರ್ಸ್ ತಂಡವು ಶಿವರಾಜ್‌ಕುಮಾರ್ ನಾಯಕತ್ವದ ರಾಷ್ಟ್ರಕೂಟ ಪ್ಯಾಂಥರ್ಸ್ ತಂಡವನ್ನು ಸೋಲಿಸಿ ಈ ಬಾರಿಯೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಪಂದ್ಯಾವಳಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರು, ಧಾರಾವಾಹಿ ನಟರು, ತಂತ್ರಜ್ಞರ ಜೊತೆ ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟಿಗರು ಕೂಡ ಆಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





