ಬೆಂಗಳೂರು: ಬುಧವಾರ ಬೆಳ್ಳಂಬೆಳಗ್ಗೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಖಾಸಗಿ ಬಸ್ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಂಪೂರ್ಣವಾಗಿ ಮಂಜು ಆವರಿಸಿರುವ ಹಿನ್ನೆಲೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಈ ಸರಣಿ ಅಪಘಾತ ಸಂಭವಿಸಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ದುರ್ಗಾಂಬಾ ಬಸ್ ಚಾಲಕ ಅಪಘಾತವನ್ನು ಕಂಡು ಬಸ್‌ಅನ್ನು ನಿಲ್ಲಿಸಿದ್ದಾರೆ. ಈ ವೇಳೆ ದುರ್ಗಾಂಬಾ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ದುರ್ಗಾಂಬಾ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





