Breaking News

ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು…

ಬೆಂಗಳೂರು:‌ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನ ಗೆಲ್ಲುವ ಗುರಿ ಹಾಕಿಕೊಂಡಿರುವ ಕಾಂಗ್ರೆಸ್‌ ನಿಮಗ ಮಂಡಳಿ ನೇಮಕದ ಕುರಿತು ಹೈಕಮಾಂಡ್‌ ಗೆ ಫೈನಲ್‌ ಲಿಸ್ಟ್‌ ನೀಡಿದೆ. ಮೊದಲ ನಿಗಮ ಮಂಡಳಿ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಅವಕಾಶ ನೀಡಿದ್ದಾರೆ ಎಂಬ ಮಾತುಗಳಿಗೆ ವಿರೋಧ ಕೇಳಿ ಬಂದಿತ್ತು. ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ತಿಳಿಸಿದರು.

ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕೂತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು ಎಂದು ತಿಳಿಸಿದರು.ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದು ಹೇಳಿದರು. ಜನಸಾಮಾನ್ಯರು ತಮ್ಮ ಕಷ್ಟಗಳನ್ನು ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಕಷ್ಟಗಳನ್ನು ಕೇಳಲು ನಾವೇ ಅವರ ಬಳಿ ಹೋಗಬೇಕು, ಅವರ ಒತ್ತಡ ಕಡಿಮೆ ಮಾಡುವ ಉದೇಶದಿಂದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

Share News

About BigTv News

Check Also

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್, ಫೋಟೋಶೂಟ್ ಪೋಸ್ಟ್‌ಗೆ ಬ್ರೇಕ್..? ಡಿಜಿಪಿಗೆ ಶಿಫಾರಸು ಪತ್ರ..

ಪೊಲೀಸ್ ಸಮವಸ್ತ್ರದಲ್ಲಿ ರೀಲ್ಸ್ ಬೇಡ..! ಖಾಕಿಯ ಘನತೆ ಉಳಿಸಲು ಕಠಿಣ ನಿಯಮಕ್ಕೆ ಶಿಫಾರಸು… ಬೆಂಗಳೂರು: ಪೊಲೀಸ್ ಸಮವಸ್ತ್ರ ಧರಿಸಿ ರೀಲ್ಸ್, …

Leave a Reply

Your email address will not be published. Required fields are marked *