Breaking News

ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ ಮತ್ತು ಆರ್ ವಿ ದೇಶಪಾಂಡೆಗೆ ನೀಡಿದ್ದಾರೆ. ಮುಂದೆ ಯಾರ್ಯಾರಿಗೆ ಏನೇನು ಸ್ಥಾನಮಾನ ಕೊಡ್ತಾರೋ ನೋಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದರು. ಶ್ರೀರಾಮನ ಬಗ್ಗೆ ಹಾಗೂ ಶ್ರೀರಾಮನ ಅಸ್ತಿತ್ವದ ಬಗ್ಗೆ ಪ್ರಶ್ನಿಸುವ ಕ್ಷುಲ್ಲಕ ಕಾರ್ಯವನ್ನು ಮಾಡುವ ಮೂಲಕ ಕಾಂಗ್ರೆಸ್ ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಇದು ಅವರಿಗೆ ಶೋಭೆ ತರುವುದಿಲ್ಲ ಎಂದರು.

ಯತ್ನಾಳ ಹೇಳಿಕೆಯಿಂದ ಪಕ್ಷಕ್ಕೆ ಆಗ್ತಿರೋ ಡ್ಯಾಮೇಜ್ ಕುರಿತು ಮಾತನಾಡಿದ ಜೋಶಿ, ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೂಡಲೇ ನಿಲ್ಲಿಸಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜೋಶಿ ಕಿಡಿಕಾರಿದ್ದು, ನಾನು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಇರಲಿಲ್ಲ. ಆದರೆ ಯಾರು ಸಹ ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಕೂಡಲೆ ಬಹಿರಂಗ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಹೇಳಿದರು.

ಹುಬ್ಬಳ್ಳಿಯ ಮಯೂರ ಎಸ್ಟೇಟ್ ನಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ‌.ಎಸ್‌. ಈಶ್ವರಪ್ಪ ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯಿತು. ಪ್ರಲ್ಹಾದ್ ಜೋಶಿಯವರ ಪಾದ ನಮಸ್ಕರಿಸಲು ಮುಂದಾದ ಈಶ್ವರಪ್ಪ ಈಶ್ವರಪ್ಪ ಬಾಗುತ್ತಿದ್ದಂತೆ ಹಿಂದೆ ಸರಿದ ಪ್ರಲ್ಹಾದ್ ಜೋಶಿ ಅವರು ಈಶ್ವರಪ್ಪರನ್ನು ನೋಡುತ್ತಿದ್ದಂತೆ ಮಾಧ್ಯಮದವರನ್ನು ಕರೆದುಕೊಂಡೇ ಬಂದಿದ್ದೀರಾ ಎಂದು ಚಟಾಕಿ ಹಾರಿಸಿದರು‌.

Share News

About BigTv News

Check Also

Featured Video Play Icon

ಮಹದಾಯಿ ಬಗ್ಗೆ ಬಿಜೆಪಿ ಭರವಸೆ ಹುಸಿಯಾಗಿದೆ: ಮೋದಿ ಸರ್ಕಾರದ ವಿರುದ್ಧ ಮೊಯ್ಲಿ ಕಿಡಿ..!

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ …

Leave a Reply

Your email address will not be published. Required fields are marked *

You cannot copy content of this page