Breaking News

ಹೊಸ ವರ್ಷಾಚರಣೆಯ ನೆಪದಲ್ಲಿ ಅಸಭ್ಯವಾಗಿ ವರ್ತಿಸುವುದು,ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ ತಯಾರಾಗಿದೆ….

ಮೈಸೂರು: ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ 31ರ ರಾತ್ರಿ ಅಸಭ್ಯವಾಗಿ ವರ್ತಿಸುವುದು, ಕುಡಿದು ಹುಚ್ಚಾಟವಾಡುವುದು ಸೇರಿದಂತೆ ಕಾನೂನು ಉಲ್ಲಂಘನೆಯ ಚಟುವಟಿಕೆ ನಡೆಸುವವರನ್ನು ಹೆಡೆಮುರಿ ಕಟ್ಟಲು ಮೈಸೂರಿನಲ್ಲಿ ಚಾಮುಂಡಿ ಪಡೆ (ಸುರಕ್ಷತಾ ಪಿಂಕ್ ಗರುಡಾ) ತಯಾರಾಗಿದೆ.ಹೊಸ ವರ್ಷಾಚರಣೆ ಸಲುವಾಗಿ ಜನ ಮನೆಯಿಂದ ಹೊರಬಂದು ತಮಗೆ ಇಷ್ಟವಾದ ಸ್ಥಳಗಳಲ್ಲಿ ಪಾರ್ಟಿಗಳನ್ನು ಮಾಡುವುದರಿಂದ ನಗರದಾದ್ಯಂತ ಜನ ಸಂದಣಿಯಿರುತ್ತದೆ. ಹೋಟೆಲ್, ರೆಸಾರ್ಟ್‌ಗಳಲ್ಲಿ ವರ್ಷಾಚರಣೆಯ ಕಾರ್ಯಕ್ರಮಗಳು ಜೋರಾಗಿಯೇ ನಡೆಯುತ್ತದೆ. ರಾತ್ರಿಯಿಡೀ ಕೆಲವರು ನಗರದಲ್ಲಿ ಅಡ್ಡಾಡುವ ಮೂಲಕ ಹೊಸ ವರ್ಷದ ಶುಭಾಶಯ ವಿನಿಮಯ ಮಾಡುವುದು ನಡೆಯುತ್ತದೆ.ಇಷ್ಟೇ ಆಗಿದ್ದರೆ ಯಾವುದೇ ಸಮಸ್ಯೆಯಿರುತ್ತಿರಲಿಲ್ಲ ಆದರೆ ವರ್ಷಾಚರಣೆಯ ಗುಂಗಿನಲ್ಲಿ ಅಸಭ್ಯವಾಗಿ ವರ್ತಿಸುವ ಪುಂಡರು ಮಹಿಳೆ ಮಕ್ಕಳಿಗೆ ಹಿಂಸೆ ನೀಡುವುದು, ಅಸಭ್ಯವಾಗಿ ವರ್ತಿಸುವುದು ಸೇರಿದಂತೆ ಹಲವು ರೀತಿಯ ಹುಚ್ಚಾಟಗಳನ್ನು ನಡೆಸುವುದರಿಂದ ಮಹಿಳೆ ಮತ್ತು ಮಕ್ಕಳ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಕಾನೂನು ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.

Share News

About BigTv News

Check Also

ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!

ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ …

Leave a Reply

Your email address will not be published. Required fields are marked *