ಮುಂಬೈ: ಇದು ದೇಶದ ಅತೀ ಉದ್ದದ ಸಮುದ್ರ ಸೇತುವೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಾಗಾದರೆ ಈ ಸೇತುವೆ ಎಲ್ಲಿದೆ ಹಾಗೂ ಉದ್ಘಾಟನೆ ದಿನಾಂಕ, ವೆಚ್ಚ ಹಾಗೂ ವಿಶೇಷತೆಗಳ ಬಗ್ಗೆ ಮಾಹಿತಿಯನ್ನು ಇಲ್ಲಿ ತಿಳಿಯಿರಿ.ದೇಶದಲ್ಲಿ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಜನವರಿ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮಾಹಿತಿ ನೀಡಿದ್ದಾರೆ. ಮುಂಬೈನ ಸೆವ್ರಿ ಮತ್ತು ರಾಯಗಡ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋ ಮೀಟರ್ ಉದ್ದದ ಈ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12ರಂದು ಇದನ್ನು ಉದ್ಘಾಟನೆ ಮಾಡಲಿದ್ದು, ಈ ಸೇತುವೆಯಿಂದ ಆರ್ಥಿಕ ಅಭಿವೃದ್ಧಿ ಆಗಲಿದೆ ಎಂದು ಶಿಂಧೆ ಮಾಧ್ಯಮಗಳಿಗೆ ತಿಳಿಸಿದರು.
ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸಲಿದ್ದು, ಇದು 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋ ಮೀಟರ್ ಮತ್ತು ಪ್ರದೇಶದಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ “ಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನವ ಶೇವಾ ಅಟಲ್ ಸೇತು” ಎಂದು ಹೆಸರನ್ನು ಇಡಲಾಗುತ್ತದೆ ಎನ್ನುವ ಮಾಹಿತಿ ತಿಳಿಯಿರಿ.
bigtvnews | Hubli Dharwad News | Kannada News | Karnataka News Hubli News | News In Hubli | Local news





