ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಶುಭ ಗಳಿಗೆಯಲ್ಲಿ ದೇಶಾದ್ಯಂತದ ಸಂತರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ ಈ ನಡುವೆಯೇ ದೇವಸ್ಥಾನಕ್ಕೆ ಬಾಂಬ್ ಹಾಕುವುದಾಗಿ ಇಮೇಲ್ ಮೂಲಕ ಬೆದರಿಕೆಯ ಸಂದೇಶವೊಂದು ಬಂದಿದೆ. ಈ ಸಂದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್‌ಗೂ ಬೆದರಿಕೆಯನ್ನು ಹಾಕಲಾಗಿದೆ. ಬೆದರಿಕೆ ಸಂದೇಶ ಕಳುಹಿಸಿದವರು ಐಎಸ್‌ಐ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಇದರಿಂದಾಗಿ ಪೊಲೀಸರು ಕೂಡಲೇ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಇಮೇಲ್ ಕಳುಹಿಸಲಾಗಿದೆ. ಅದರಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ ಎಂದೂ ಹೇಳಲಾಗುತ್ತಿದೆ. ಕಳುಹಿಸುವವರು ಜುಬೇರ್ ಹುಸೇನ್ ಖಾನ್ ಎಂದು ಬರೆದಿದ್ದಾರೆ. ಈ ಅಪರಿಚಿತ ಸಂದೇಶದಾರ ದೇವಸ್ಥಾನಕ್ಕೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, STF ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಸ್ವತಃ ದೇವೇಂದ್ರ ತಿವಾರಿಗೂ ಬೆದರಿಕೆ ಹಾಕಿದ್ದಾನೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





