Breaking News

ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ: ಬಿ.ವೈ.ವಿಜಯೇಂದ್ರ.

ಬೆಂಗಳೂರು: ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಕಿಡಿಕಾರಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಜನವರಿ 22 ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರ್ಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

Share News

About BigTv News

Check Also

ರೌಡಿಶೀಟರ್ ಜೊತೆ ಶಾಸಕನ ಬರ್ತ್‌ಡೇ ಸಂಭ್ರಮ..!ಕಳೆದ ವರ್ಷ ಪಿಐ ಸಸ್ಪೆಂಡ್… ಈ ವರ್ಷ ಶಾಸಕರ ಎಂಟ್ರಿಗೆ ಭಾರೀ ವಿವಾದ..!

ರೌಡಿಶೀಟರ್ ಜೊತೆ ಬಿಜೆಪಿ ಶಾಸಕ..!ಪಿಐಗೆ ಅಮಾನತು… ಶಾಸಕರ ಭೇಟಿ ವೈರಲ್..! ಬೆಂಗಳೂರು: ಕಳೆದ ವರ್ಷ ಇದೇ ರೌಡಿಶೀಟರ್‌ನ ಹುಟ್ಟುಹಬ್ಬದ ಸಂಭ್ರಮದಲ್ಲಿ …

Leave a Reply

Your email address will not be published. Required fields are marked *