Breaking News

ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯ…..

ಚಿತ್ರದುರ್ಗ: ಶಾಲಾ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮಲ್ಲಪ್ಪನಹಳ್ಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಮಲ್ಲಪ್ಪನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಸ್ಪಲ್ಟಿಯಾಗಿದ್ದು, ಘಟನೆಯಲ್ಲಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡೊದ್ದಾರೆ. ಇನ್ನು ಗಾಯಾಳು ವಿದ್ಯಾರ್ಥಿಗಳನ್ನು ಹೊಸದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಈ ಪ್ರಕರಣ ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ. ಇನ್ನು ಹೊಸ ವರ್ಷದ ಹೊಸ್ತಿಲಲ್ಲಿ ಪ್ರತ್ಯೇಕ ಅಪಘಾತದಲ್ಲಿ ಮೂವರು ಅಸುನಿಗಿದ ಘಟನೆ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *