ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ರಾಜ್ಯದ ತಿರುಚಿನಾಪಳ್ಳಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ರಾಜ್ಯದ 3ನೇ ವಿಮಾನ ನಿಲ್ದಾಣದ ವಿಶೇಷತೆಗಳನ್ನು ತಿಳಿಯಿರಿ.
ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮಿಳುನಾಡು ಪ್ರವಾಸದಲ್ಲಿದ್ದಾರೆ. ತಿರುಚಿನಾಪಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅನ್ನು ಅವರು ಉದ್ಘಾಟನೆ ಮಾಡಲಿದ್ದಾರೆ. ತಮಿಳುನಾಡಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸೇರಿದಂತೆ ಹಲವಾರು ಗಣ್ಯರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
1,100 ಕೋಟಿ ರೂ. ವೆಚ್ಚದಲ್ಲಿ ತಮಿಳುನಾಡು ರಾಜ್ಯದ 3ನೇ ವಿಮಾನ ನಿಲ್ದಾಣವಾದ ತಿರುಚಿನಾಪಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಅಭಿವೃದ್ಧಿಗೊಳಿಸಲಾಗಿದೆ. ಟರ್ಮಿನಲ್ ಮುಂಭಾಗದ ದೇವಾಲಯದ ಮಾದರಿಯ ಗೋಪುರ ಪ್ರಯಾಣಿಕರನ್ನು ಸೆಳೆಯುತ್ತಿದೆ. ಟರ್ಮಿನಲ್ ಅನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





