Breaking News

ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌….

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕ್ಷೇತ್ರಗಳನ್ನ ಗೆಲ್ಲಲು ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿದೆ. ಅದರಂತೆ ಹೆಚ್ಚು ಸ್ಥಾನಗಳನ್ನ ಗೆಲ್ಲಲ್ಲು ರಾಜ್ಯ ಕಾಂಗ್ರೆಸ್‌ ನಾಯಕರು ಭರ್ಜರಿ ತಯಾರಿ ನಡೆಸಿದೆ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯಾಗಿರುವ ಡಿ ಕೆ ಶಿವಕುಮಾರ್‌ ಗೆ ಅವರಿಗೆ ಬೆಂಗಳೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯ ನಾಲ್ಕು ಲೋಕಸಭಾ ಕ್ಷೇತ್ರಗಳ ಫೈಕಿ ಕನಿಷ್ಠ ಎರಡು ಕ್ಷೇತ್ರಗಳನ್ನ ಗೆಲ್ಲುವ ಮಾಸ್ಟರ್‌ ಪ್ಲಾನ್‌ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್‌ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಪರವಾದ ಅಲೆ ಸೃಷ್ಟಿಯಾಗಿದ್ದು, ಇದೀಗ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 8 ವಲಯಗಳಲ್ಲಿ 28 ವಿಧಾನಸಭಾ ಕ್ಷೇತ್ರಗಳಲ್ಲೂ ಹೊಸ ಕಾರ್ಯಕ್ರಮವನ್ನ ತರಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮುಂದಾಗಿದ್ದಾರೆ. ಅದರಂತೆ ಲೋಕಸಭಾ ಚುಣಾವಣೆಒಗೆ ಕೆಲವು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಬೆಂಗಳೂರು ಜನತೆಯ ಮನಸ್ಸು ಗೆಲ್ಲುವ ತಂತ್ರಗಾರಿಗೆಯನ್ನ ಡಿಕೆ ಶಿವಕುಮಾರ್‌ ನಡೆಸಿದ್ದಾರೆ.

Share News

About BigTv News

Check Also

ಧಾರವಾಡದಲ್ಲಿ ದಾಳಿ ದಂಧೆ!ಯುವ ಕಾಂಗ್ರೆಸ್ ಮುಖಂಡ ಪೈರೋಜ್‌ಖಾನ ಪಠಾಣ ಮನೆಗೆ ನುಗ್ಗಿ ಹತ್ಯೆ…

Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …

Leave a Reply

Your email address will not be published. Required fields are marked *