Breaking News

ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ….

ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮನವಿ ಮಾಡಿದ್ದಾರೆ.ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಸಕ ಯಶ್ ಪಾಲ್ ಸುವರ್ಣ, ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಲಿದೆ.ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಎಲ್ಲರಿಗೂ ಶ್ರೀರಾಮ ದೇವರ ಸೇವೆಯಲ್ಲಿ ಜನ ಪಾಲ್ಗೊಳ್ಳಲು ಅವಕಾಶ ಸಿಗಬೇಕು ಎಂದು ಮನವಿ ಮಾಡಿದ್ದಾರೆ.ಅಲ್ಲದೇ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರಕಾರಿ ಸಂಸ್ಥೆ ಹಾಗೂ ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ಸೇರಿದಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯ ಮಾಡಿದ್ದಾರೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *