ಬೆಂಗಳೂರು: ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತು ಹೆಚ್ ಆಂಜನೇಯ ಮಾತನಾಡಿ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





