ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ಅವರೇ ಶ್ರೀರಾಮ, ಮತ್ತೆ ಯಾಕೆ ಆ ರಾಮನಿಗೆ ಹೋಗಿ ಶ್ರೀರಾಮನನ್ನು ಪೂಜಿಸಬೇಕು ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ
ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು “ರಾಮಮಂದಿರ ಉದ್ಘಾಟನೆಗೆ ಸಿಎಂ ಸಿದ್ಧರಾಮಯ್ಯಗೆ ಆಹ್ವಾನವಿಲ್ಲದ ವಿಚಾರಕ್ಕೆ ಉತ್ತರಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು.
ಸ್ವತಃ ಸಿದ್ಧರಾಮಯ್ಯ ಅವರೇ ರಾಮ, ಆ ರಾಮನಿಗೇಕೆ ಹೋಗಿ ಪೂಜಿಸಬೇಕು. ಸಿದ್ದರಾಮನ ಹುಂಡಿಯಲ್ಲಿ ರಾಮನ ದೇವಸ್ಥಾನ ಇದೆ, ಪೂಜಿಸುತ್ತಾರೆ. ಅಯೋಧ್ಯೆಯಲ್ಲಿರುವುದು ಬಿಜೆಪಿ ರಾಮ, ಅದು ಬಿಜೆಪಿ ಅವರನ್ನು ಕರೆಸಿಕೊಂಡು ಭಜನೆ ಮಾಡುತ್ತಾರೆ ಎಂದು ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಬಗ್ಗೆ ವ್ಯಂಗ್ಯವಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





