ಬೆಂಗಳೂರು: ಬೆಂಗಳೂರು ನಗರದಲ್ಲಿ ಮೂರು ದಿನಗಳ ಕಾಲ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಆಯೋಜನೆ ಮಾಡಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿರಿಧಾನ್ಯ ಮತ್ತು ಅದರ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆ ಹಾಗೂ ರಫ್ತುದಾರರ ಸಮಾವೇಶಕ್ಕೆ ಚಾಲನೆ ಸಿಕ್ಕಿದೆ.ನಗರದ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ನಡೆಯಲಿದೆ. ಜನವರಿ 5 ರಿಂದ 7ರ ತನಕ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುವರು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅಂತರರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುವರು. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಅಂತರರಾಷ್ಟ್ರೀಯ ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಸ್ತು ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





