ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟಗಾರನ ಬಂಧನ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ರಾಮನ ಭಕ್ತನ ಬಂಧನ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಗೆ ಕರೆ ನೀಡಿದ್ದು, ಹುಬ್ಬಳ್ಳಿಯಲ್ಲೂ ಬೃಹತ್ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯ ಎದುರು ಬೃಹತ್ ವೇದಿಕೆ ಸಿದ್ದವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಖಾಂತರ ತೊಡೆ ತಟ್ಟಿದ ಬಿಜೆಪಿ ಸಿದ್ದತೆ ಮಾಡಿಕೊಂಡಿದೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಜೆ 4 ಗಂಟೆಯವರೆಗೆ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರ ಜೊತೆಗೆ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ, ಪ್ರದೀಪ ಶೆಟ್ಟರ್ ಸೇರಿದಂತೆ ಅನೇಕ ಹಿಂದೂಪರ ಸಂಘಟನೆ ಕಾರ್ಯಕರ್ತರು, ಎಸ್‌ಎಸ್‌ಕೆ ಸಮಾಜದ ನಾಯಕರು ಬಾಗಿಯಾಗಲಿದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





