Breaking News

ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಕ್ಷಮತೆಯಲ್ಲಿ ಜಗತ್ತಿನಲ್ಲೇ ನಂಬರ್‌ 3ನೇ ಸ್ಥಾನ….

ಬೆಂಗಳೂರು: ಬೆಂಗಳೂರಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಾಗ ಸುದ್ದಿಯಲ್ಲಿರುತ್ತದೆ. ಇತ್ತೀಚೆಗಷ್ಟೇ ಜಗತ್ತಿನ ಅತೀ ಸುಂದರ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಪಾತ್ರವಾಗಿದ್ದು, ಇದೀಗ ಮತ್ತೊಂದು ಗರಿ ಲಭಿಸಿದೆ. ಕಾರ್ಯಕ್ಷಮತೆಯಲ್ಲಿ ಜಗತ್ತಿನಲ್ಲೇ ನಂಬರ್‌ 3ನೇ ಸ್ಥಾನ ಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಯುನೇಸ್ಕೋದ 2023ರ ಪ್ರಿಕ್ಸ್ ವರ್ಸೇಲ್ಸ್‌ (Prix Versailles)ನ ಪ್ರತಿಷ್ಠಿತ ಪುರಸ್ಕಾರದೊಂದಿಗೆ ಗೌರವಿಸಲ್ಪಟ್ಟಿದೆ. ವಿಮಾನ ನಿಲ್ದಾಣದ ಟರ್ಮಿನಲ್ 2ಗೆ ಜಗತ್ತಿನ ಅತ್ಯಂತ ಸುಂದರವಾದ ವಿಮಾನ ನಿಲ್ದಾಣಗಳಲ್ಲಿ ಒಂದು ಎಂದು ಗುರುತಿಸಲ್ಪಟ್ಟಿದೆ. ಮತ್ತು ಒಳಾಂಗಣ ವಿನ್ಯಾಸ 2023ರ ವಿಶ್ವ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಾರ್ಯಾಚರಣೆಯಲ್ಲಿನ ನಿರ್ವಹಣಾ ಸಾಧನೆ ಮತ್ತು ಸಮಯ ಕ್ಷಮತೆ ವಿಷಯದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜಾಗತಿಕ ಮಟ್ಟದಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ

Share News

About BigTv News

Check Also

ಕರ್ತವ್ಯ ಆ್ಯಪ್‌ಗೆ ಖಾಕಿ ಕಿಡಿ..! | 24×7 ಡ್ಯೂಟಿ ಪೊಲೀಸರಿಗೆ ಹೊಸ ಹಾಜರಾತಿ ತಲೆನೋವುಹಾಜರಾತಿ ಕಡ್ಡಾಯಕ್ಕೆ ಪೊಲೀಸರ ವಿರೋಧ..!

ಕರ್ತವ್ಯ ಆ್ಯಪ್‌ಗೆ ಪೊಲೀಸರ ನೋ ಎಂಟ್ರಿ! | ಖಾಕಿಗೆ ಹೊಸ ರೂಲ್ಸ್‌ ಮೇಲೆ ಆಕ್ರೋಶ… ಖಾಕಿಗೆ ಕರ್ತವ್ಯ ಆ್ಯಪ್ ಶಾಕ್! …

Leave a Reply

Your email address will not be published. Required fields are marked *