Breaking News

ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯ…

ಬೆಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. 18177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿ.ಎಸ್.ಟಿ.ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ.ಅನುದಾನ ಬಿಡುಗಡೆಗೆ ಒತ್ತಾಯಿಸದ ಬಿಜೆಪಿ ಸಂಸದರ ವಿರುದ್ಧ ಸುರ್ಜೆವಾಲಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ 236 ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ. ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

Share News

About BigTv News

Check Also

ವೆನ್ನಿಲಾ ಕೊಲೆ ಪ್ರಕರಣ. ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್..

ಬೆಂಗಳೂರು: ವೆನ್ನಿಲಾ ಕೊಲೆ ಪ್ರಕರಣ – ಕಾಡುಗೋಡಿ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್ ಬೆಂಗಳೂರು ನಗರದ …

Leave a Reply

Your email address will not be published. Required fields are marked *