Breaking News

ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ…

ಹುಬ್ಬಳ್ಳಿ: ರಾಮಜನ್ಮ ಭೂಮಿ ಹೋರಾಟದಲ್ಲಿ ಭಾಗಿಯಾದ ಶ್ರೀಕಾಂತ್ ಪೂಜಾರ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ಕಾರ್ಯಕರ್ತರು ಮತ್ತು ಹಿಂದೂ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ.ಇದೇ ಜನವರಿ 22 ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಸಿದ್ದವಾಗಿದ್ದರೆ. ಇತ್ತ ರಾಜ್ಯ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಅರೆಸ್ಟ್ ಮಾಡ್ತಿದ್ದಾರೆಂದು, ಬಿಜೆಪಿ ಕಾರ್ಯಕರ್ತರು ಶ್ರೀರಾಮ ಜಯರಾಮ ಎಂದು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡ್ತಿದ್ದಾರೆ.

ಇನ್ನು ಸಿದ್ದರಾಮಯ್ಯ ಲುಚ್ಚಾ ಎಂದು ಘೋಷಣೆ ಕೂಗಿ ಆಕ್ರೋಶ ಹೊರ ಹಾಕ್ತಿರೋ ಹಿಂದೂ ಕಾರ್ಯಕರ್ತರು, ಸಿದ್ದ ರಾಮಯ್ಯ ಖಾನ್ ಎಂದು ಫೋಟೋ ಹಿಡಿದಿದ್ದಾರೆ. ಅಷ್ಟೆ ಅಲ್ದೆ ಮಾಜಿ ಸಿಎಂ ಜಗದೀಶ್ ಶೆಟ್ಟರ್,ಶಾಸಕ ಪ್ರಸಾದ ಅಬ್ಬಯ್ಯ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇನ್ನು ಬಿಜೆಪಿಯಿಂದ ಪ್ರತಿಭಟನೆ ಹಿನ್ನೆಲೆಯಲ್ಲಿ, ಬ್ರಾಡ್ ವೆ ರಸ್ತೆ ಸಂಪೂರ್ಣ ಬಂದ್ ಮಾಡಿದ್ದಾರೆ. ಠಾಣೆಗಳಿಗೆ ಯಾರೂ ನುಗ್ಗುದಂತೆ ವಾಹನ ಅಡ್ಡ ನಿಲ್ಲಿಸಿರೋ ಪೊಲೀಸರು. ಬ್ಯಾರಿಕೇಡ ಸುತ್ತ ಪೊಲೀಸ್ ಸರ್ಪಗಾವಲು ಹಾಕಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಕಮೀಷನರ್ಸ್ಥಳದಲ್ಲಿ 500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದಾರೆ.

Share News

About BigTv News

Check Also

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ …

Leave a Reply

Your email address will not be published. Required fields are marked *