ಹುಬ್ಬಳ್ಳಿಯ: ಶ್ರೀಕಾಂತ್ ಪೂಜಾರಿ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಶಹರ ಠಾಣೆ ಇನ್ಸ್ ಪೆಕ್ಟರ್ ಮಹ್ಮದ್ ರಫೀಕ್ ತಹಶಿಲ್ದಾರರನ್ನು ಅಮಾನತು ಮಾಡುವ ಪ್ರಶ್ನೆಯೇ ಇಲ್ಲ. ಅವರು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು.ನಗರದಲ್ಲಿಂದು ಮಾತನಾಡಿದ ಅವರು, ವಿಷಯವನ್ನು ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಗೆ ಇದನ್ನು ಬೇರೆ ರೀತಿಯಲ್ಲಿ ಬಿಂಬಿಸುವ ಕೆಲಸ ಮಾಡಲಾಗುತ್ತಿದೆ. ಹೈಕೋರ್ಟ್ ಆದೇಶದ ಮೇರೆಗೆ ಪೋಲಿಸರು ಎಲ್’ಪಿಸಿ ಕೇಸ್’ಗಳನ್ನು ವಿಲೇವಾರಿ ಮಾಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಯಾವ ಕಾರಣಕ್ಕೂ ಇನ್ಸ್ಪೆಕ್ಟರ್ ಎಂ.ಎಂ.ತಹಶಿಲ್ದಾರ ಅಮಾನತು ಮಾಡಬೇಕು. ಒಬ್ಬ ಖಡಕ್ ಅಧಿಕಾರಿಯಾಗಿದ್ದು, ರೌಢಿಜಂ ವಿರುದ್ಧ ತಮ್ಮ ದಕ್ಷತೆಯನ್ನು ತೋರಿಸಿದ್ದಾರೆ. ಅವರೊಬ್ಬ ಜಾತ್ಯಾತೀತ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಹುಕ್ಕೇರಿಯಲ್ಲಿ ಠಾಣೆಯಲ್ಲಿ ಗಣೇಶ ಪ್ರತಿಷ್ಠಾಪಿಸಿ ತಮ್ಮ ಧಾರ್ಮಿಕ ಮನೋಭಾವ ಏನೆಂಬುದು ತೋರಿಸಿದ್ದಾರೆ. ಇದನ್ನು ನೋಡಿ ಆದರೂ ಬಿಜೆಪಿಯವರಿಗೆ ನಾಚಿಕೆ ಆಗಬೇಕು ಎಂದು ಕಿಡಿಕಾರಿದರು.ಇದೀಗ ಇನ್ಸ್ಪೆಕ್ಟರ್ ವಿರುದ್ಧ ಬಿಜೆಪಿಯವರು ಸುಖಾ ಸುಮ್ಮನೆ ಮುಗಿ ಮುಳುತ್ತಿದ್ದಾರೆ. ಅವರನ್ನು ಯಾವುದೇ ಕಡ್ಡಾಯ ರಜೆಯ ಮೇಲೆ ಕಳಿಸಿಲ್ಲ, ಅವರು ತಮ್ಮ ವೈಯಕ್ತಿಕ ಕಾರಣಕ್ಕೆ ರಜೆ ತಗೊಂಡಿದ್ದಾರೆ. ಸರ್ಕಾರ ಯಾವುದೇ ರೀತಿಯ ರಜೆ ಕೊಟ್ಟಿಲ್ಲ, ನಿರ್ದೇಶನವು ನೀಡಿಲ್ಲ ಎಂದು ಇನ್ಸ್ಪೆಕ್ಟರ್’ಗೆ ಕಡ್ಡಾಯ ರಜೆ ನೀಡಲಾಗಿದೆ ಎಂಬ ವಿಷಯಕ್ಕೆ ಸ್ಪಷ್ಟನೆ ನೀಡಿದರು.ಶ್ರೀಕಾಂತ್ ಪೂಜಾರ ಮೇಲೆ ಈಗಾಗಲೇ 16 ಕೇಸ್ ಇವೆ. ಅಂತವರ ಪರವಾಗಿ ಬಿಜೆಪಿ ನಿಂತು ಹೋರಾಟ ಮಾಡುವುದು ಎಷ್ಟರಮಟ್ಟಿಗೆ ಸರಿ. ಇದರಿಂದ ಬಿಜೆಪಿ ತತ್ವ ಸಿದ್ದಾಂತ ಏನೆಂಬುದು ಗೊತ್ತಾಗುತ್ತದೆ. ಬಿಜೆಪಿಯವರು ರೌಡಿಶೀಟರ್’ಗಳುತಮ್ಮ ಪಕ್ಷದ ಫೀಲರ್’ಗಳೆಂದು ಒಪ್ಪಿಕೊಳ್ಳಲಿ, ನಾವು ಅವರ ಹೋರಾಟವನ್ನು ಒಪ್ಪಿಕೊಳ್ಳುತ್ತೇವೆ ಎಂದರು.ಇದೀಗ ಇನ್ಸ್ಪೆಕ್ಟರ್ ಅಮಾನತು ಕುರಿತು ಬಿಜೆಪಿಯ ಗೊಡ್ಡು ಬೆದರಿಕೆಗೆ ಸರ್ಕಾರ ಹೆದರುವ ಪ್ರಶ್ನೆಯಿಲ್ಲ, ಹೀಗೆ ಮುಂದುವರೆದರೇ ನಾವು ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಬಿಜೆಪಿಯ ಕುತಂತ್ರವನ್ನು ನಾವು ಒಪ್ಪಿಕೊಳ್ಳುವುದಿಲ್ಲ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ತಿಳಿಸಿದರು.ಬೈಟ್ -ಪ್ರಸಾದ ಅಬ್ಬಯ್ಯ , ಕಾಂಗ್ರೆಸ್ ಶಾಸಕ
Check Also
ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ
ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …
bigtvnews | Hubli Dharwad News | Kannada News | Karnataka News Hubli News | News In Hubli | Local news

