Breaking News

ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ: ಬಿ ವೈ ವಿಜಯೇಂದ್ರ.

ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್‍ಡಿಐ (ಇಂಡಿ) ಒಕ್ಕೂಟ, ಕಾಂಗ್ರೆಸ್‍ಗೆ ಮರ್ಮಾಘಾತ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.ಈ ಕುರಿತು ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಸೋಮವಾರ ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಹೇಳಿದರು.
ಬಿಜೆಪಿ, ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು. ದೇಶ- ರಾಜ್ಯದ ಜನರು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ ಎಂದು ನುಡಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಮೋದಿಜೀ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *