Breaking News

ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ….

ವಿಜಯನಗರ : ಇಷ್ಟು ದಿನ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುವ ಘಟನೆಗಳು ಹೆಚ್ಚಾಗಿ ರಾಯಚೂರಿನಲ್ಲಿ ಕಂಡು ಬರುತ್ತಿದ್ದವು. ಈಗ ಆ ನೀರು ವಿಜಯನಗರಕ್ಕೂ ಹರಿದಿದೆ. ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು ಅನ್ನೋ ಹಾಗೆ ಈಗ ಅಧಿಕಾರಿಗಳು ನೀರು ಪರಿಶೀಲನೆಗೆ ಮುಂದಾಗಿದ್ದಾರೆ.

ನೀರು ಮನುಷ್ಯನಿಗೆ ಅತ್ಯಗತ್ಯವಾದ ಜೀವಜಲ. ಆದರೆ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುತ್ತಿರುವ ಘಟನೆಗಳು ಆಗಾಗ ರಾಜ್ಯದಲ್ಲಿ ಕಂಡು ಬರುತ್ತಿದ್ದು ಆತಂಕಕ್ಕೆ ಎಡೆಮಾಡಿವೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಕಾರಿಗನೂರು ಪ್ರದೇಶದಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿಭೇದಿ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮಾತ್ರವಲ್ಲದೆ ನಗರದ 24ನೇ ವಾರ್ಡ್ ಕಾರಿಗನೂರು ಗ್ರಾಮದಲ್ಲಿ ವಾಂತಿಬೇಧಿಯಿಂದಾಗಿ 27 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಿಂದಾಗಿ ಶಾಸಕ ಎಚ್. ಆರ್. ಗವಿಯಪ್ಪ ಹಾಗೂ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Share News

About BigTv News

Check Also

ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..

ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ …

Leave a Reply

Your email address will not be published. Required fields are marked *