Breaking News

ರಸ್ತೆಯ ದುರಸ್ತಿ ಕಾಮಗಾರಿ ಕಳಪೆಯಾಗಿದ್ದು ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ರಸ್ತೆ ಹಾಳಾಗಿದೆ…..

ರಾಯಚೂರು: ರಾಯಚೂರು ಅಂದರೆ ಸಾಕು ಬಿಸಿಲು, ಧೂಳು, ಗುಂಡಿ ಬಿದ್ದ ರಸ್ತೆಗಳು ನೆನಪಿಗೆ ಬರುವಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿರ್ಮಾಣಗೊಂಡ ರಸ್ತೆಯೊಂದು ಕೆಲವೇ ದಿನಗಳಲ್ಲಿ ಎಥಾ ಸ್ಥಿತಿಗೆ ತಲುಪಿದ ಘಟನೆ ನಡೆದಿದೆ. ಇದರಿಂದ ಜನ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಕವಿತಾಳ ಸಮೀಪದ ಮಲ್ಲದಗುಡ್ಡ ಗ್ರಾಮದಿಂದ ತೋರಣದಿನ್ನಿ ಸಂಪರ್ಕಿಸುವ ಮುಖ್ಯ ರಸ್ತೆಯ ದುರಸ್ತಿ ಕಾಮಗಾರಿ ಕಳಪೆಯಾಗಿದ್ದು ಕಾಮಗಾರಿ ಮುಗಿದ ಕೆಲವೇ ದಿನಗಳಲ್ಲಿ ರಸ್ತೆ ಹಾಳಾಗಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಗುತ್ತಿಗೆದಾರರ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮಾನ್ವಿ ತಾಲ್ಲೂಕಿನ ಬ್ಯಾಗವಾಟ್‌ನಿಂದ ಮಸ್ಕಿ ತಾಲ್ಲೂಕಿನ ತೋರಣದಿನ್ನಿ ಸಂಪರ್ಕಿಸುವ 16 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಲೊಕೋಪಯೋಗಿ ಇಲಾಖೆ ವತಿಯಿಂದ ಎರಡು ಪ್ಯಾಕೇಜ್‌ಗಳಲ್ಲಿ ಇಬ್ಬರು ಗುತ್ತಿಗೆದಾರರಿಗೆ ವಹಿಸಲಾಗಿದೆ

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ‘ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *