Breaking News

ಕಾಂಗ್ರೆಸ್ ಪಕ್ಷವು ವಿನಾಶಕಾಲೇ ವಿಪರೀತ ಬುದ್ಧಿ ಎಂಬ ಮಾದರಿಯಲ್ಲಿ ವರ್ತಿಸುತ್ತಿದೆ: ಬಿ.ವೈ. ವಿಜಯೇಂದ್ರ.

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಬಗ್ಗುಬಡಿಯಲು, ಅವರ ಸೊಕ್ಕು ಮುರಿಯಲು ಕಾಂಗ್ರೆಸ್‍ನ ಮಹಾನ್ ನಾಯಕರೆಲ್ಲರೂ ಸೇರಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಬಲಿ ಹಾಕಲು 3 ಡಿಸಿಎಂಗಳ ಯೋಜನೆ ಮುಂದಿಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸರಕಾರವು ಅಭಿವೃದ್ಧಿ ಕೆಲಸಗಳನ್ನೇ ಮಾಡದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಆ ಭಗವಂತ ಇವರನ್ನು ಕ್ಷಮಿಸುವುದಿಲ್ಲ. ರಾಜ್ಯದ ಜನರು ನಿಮ್ಮ ಪ್ರತಿಯೊಂದು ನಡವಳಿಕೆಯನ್ನೂ ಗಮನಿಸುತ್ತಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವು ವಿನಾಶಕಾಲೇ ವಿಪರೀತ ಬುದ್ಧಿ ಎಂಬ ಮಾದರಿಯಲ್ಲಿ ವರ್ತಿಸುತ್ತಿದೆ. ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆಯ ಶುಭ ಘಳಿಗೆಯಲ್ಲಿ ನಾವೆಲ್ಲರೂ ಇದ್ದೇವೆ. ಇಡೀ ದೇಶದಲ್ಲಿ ನಾವೆಲ್ಲ ಒಂದು ಎಂಬ ಭಾವನೆ ಮೂಡಿದೆ. ಇಂಥ ಸಂದರ್ಭದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದೆ ಎಂದು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದರು.

Share News

About BigTv News

Check Also

ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!

ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ …

Leave a Reply

Your email address will not be published. Required fields are marked *