ರಾಕಿಂಗ್ ಸ್ಟಾರ್ ಯಶ್ 38ನೇ ಹುಟ್ಟುಹಬ್ಬ. ಹೀಗಾಗಿ ದೇಶ ಮೂಲೆ ಮೂಲೆಯಲ್ಲಿ ಅಭಿಮಾನಿಗಳು ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರದ ಸೂರಣಗಿ ಗ್ರಾಮದ ಯುವಕರು ಮಧ್ಯರಾತ್ರಿ ಯಶ್ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ಯುವಕರು ಮೃತಪಟ್ಟಿದ್ದಾರೆ.
ಸೂರಣಗಿ ಗ್ರಾಮದ ಮುರಳಿ ನಡವಿನಮನಿ (20), ಹನಮಂತ ಹರಿಜನ್ (21), ಹಾಗೂ ನವೀನ್ ಗಾಜಿ(19) ಈ ಮೂವರು ಮೃತ ಅಭಿಮಾನಿಗಳು. ಇನ್ನು ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಲಕ್ಷ್ಮೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.
ಗದಗದ ತಮ್ಮ ಅಭಿಮಾನಿಗಳು ಸಾವನ್ನಪ್ಪಿದ ವಿಷಯ ತಿಳಿಯುತ್ತಿದ್ದಂತೆ ಯಶ್ ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ. ಸುಮಾರು 3 ಗಂಟೆಗೆ ಯಶ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಸಂಜೆ 4 ಗಂಟೆ ವೇಳೆಗೆ ರಸ್ತೆ ಮಾರ್ಗವಾಗಿ ಲಕ್ಷ್ಮೀಶ್ವರದ ಸೂರಣಗಿಯಲ್ಲಿರುವ ಮೃತ ಅಭಿಮಾನಿಗಳ ಮನೆಗಳಿಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





