ಧಾರವಾಡ: ಧಾರವಾಡದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದರು.ಶಕ್ತಿ ಯೋಜನೆಯಿಂದ ಜನ ದಟ್ಟಣೆ ಹೆಚ್ಚಾಗುತ್ತಿರುವ ವಿಚಾರ ನಾಲ್ಕು ವರ್ಷದಿಂದ ಹೊಸ ಬಸ್ ಖರೀದಿ ಆಗಿರಲಿಲ್ಲ. ಸಿಬ್ಬಂದಿ ನೇಮಕವೂ ಆಗಿರಲಿಲ್ಲ. ಪ್ರತಿದಿನ ರಾಜ್ಯದಲ್ಲಿ 80 ಲಕ್ಷ ಜನ ಓಡಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಶಕ್ತಿ ಯೋಜನೆ ಆರಂಬ ಆಯ್ತು ಇದರಿಂದಾಗಿ ಆಗ ನಿತ್ಯ ಓಡಾಡುವವರ ಸಂಖ್ಯೆ 1 ಕೋಟಿ ಮೇಲಾಯ್ತು, ಹೀಗಾಗಿ ಸ್ವಲ್ಪ ಶಾಲಾ ಮಕ್ಕಳಿಗೆ ತೊಂದರೆ ಆಗಿದೆ. ಅವರಿಗೆ ಓಡಾಡಲು ಕಷ್ಟ ಆಗಿದೆ.ಈಗ ಹೊಸ ಬಸ್‌ಗಳು ಬರಲಿವೆ.ಆಗ ಸಮಸ್ಯೆ ಪರಿಹಾರ ಆಗುತ್ತದೆ ಎಂದು ಹೇಳಿದರು. ಶಕ್ತಿ ಯೋಜನೆ ಬಗ್ಗೆ ಬಿಜೆಪಿ ಆರೋಪ ವಿಚಾರ ಬಿಜೆಪಿಯವರು ತಾವು ಕೆಲಸ ಮಾಡುವುದಿಲ್ಲ. ಕೆಲಸ ಮಾಡುವವರಿಗೂ ಬಿಡುವುದಿಲ್ಲ. ಆಗುವುದಕ್ಕೆ ಹರಕತ್ತು. ಆಗದೇ ಇರುವುದಕ್ಕೆ ಕುಮ್ಮಕ್ಕು ಅಂತಾರಲ್ಲ ಹಾಗಿದಾರೆ. ಅವರು ನಾಲ್ಕು ವರ್ಷದಿಂದ ಒಂದೇ ಒಂದು ಬಸ್ ತಗೊಂಡಿಲ್ಲ. ಬಸ್ ನಿಲ್ದಾಣಗಳನ್ನು ಯಾಕೆ ಕಟ್ಟಲಿಲ್ಲ. 13888 ಸಿಬ್ಬಂದಿ ನಿವೃತ್ತ ಆಗಿದ್ದರು. ನಾಲ್ಕು ವರ್ಷದಲ್ಲಿ ಒಂದೇ ಒಂದು ನೇಮಕಾತಿ ಮಾಡಲಿಲ್ಲ. ಇವತ್ತು ಪ್ರತಿ ದಿನ 60 ಲಕ್ಷ ಹೆಣ್ಣು ಮಕ್ಕಳು ಬಸ್‌ನಲ್ಲಿ ಓಡಾಡುತ್ತಿದ್ದಾರೆ.ಇದನ್ನು ಬಿಜೆಪಿಗೆ ತಡೆಯಲು ಆಗುತ್ತಿಲ್ಲ. ಅವರಿಗೆ ಹೊಟ್ಟೆ ಉರಿ ಆಗುತ್ತಿದೆ ಎಂದು ರಾಮಲಿಂಗ ರೆಡ್ಡಿ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





